ಮಸೀದಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಬಿಜೆಪಿ ಶಾಸಕ ರಾಜುಗೌಡ.

18
firstsuddi

ಯಾದಗಿರಿ: ಸುರಪುರ ಮತಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಅವರು ಮುಸ್ಲಿಂ ಟೋಪಿ ಧರಿಸಿ ಮಸೀದಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವ ಮೂಲಕ ಮತಬೇಟೆ ಆರಂಭಿಸಿದ್ದಾರೆ.

ಸುರಪುರ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿ ಮುಸ್ಲಿಂ ಟೋಪಿ ಧರಿಸಿ ಬಿಲಾಲ್ ಮಸೀದಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ರಾಜುಗೌಡ ಕೋಮು ಸೌಹಾರ್ದತೆಯ ಸಂದೇಶ ಸಾರಿದರು.

ತಾನು ಮುಸ್ಲಿಂ ಟೋಪಿ ಧರಿಸಿ, ಮುಸ್ಲಿಂ ಸಮುದಾಯದವರಿಗೆ ಕೇಸರಿ ಶಾಲು ಹೊದಿಸಿ ಭ್ರಾತೃತ್ವ ಭಾವನೆ ಮೆರೆದಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಾನೊಬ್ಬ ಹಿಂದೂ ಆಗಿ ಮುಸ್ಲಿಂ ಟೋಪಿ ಹಾಕೊಳ್ಳುತ್ತೇನೆ. ನನ್ನ ಪಕ್ಕದಲ್ಲಿರುವ ಮುಸ್ಲಿಂ ಸ್ನೇಹಿತ ಒಬ್ಬ ಮುಸ್ಲಿಂ ಆಗಿ ಕೇಸರಿ ಶಾಲು ಹಾಕಿಕೊಳ್ಳುತ್ತಾನೆ. ನಮ್ಮಲ್ಲಿ ಯಾವುದೇ ಜಾತಿ-ಧರ್ಮ, ಭೇದ-ಭಾವ ಇಲ್ಲ ಎಂದರು.