ಮಹಾಪರಿನಿರ್ವಾಣ ದಿನ: ಅಂಬೇಡ್ಕರ್ ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಿದ ಮೋದಿ.

51
firstsuddi

ನವದೆಹಲಿ: ಇಂದು ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಮರಣಾರ್ಥ. ಇಡೀ ದೇಶವು ಮಹಾಪರಿನಿರ್ವಾಣ ದಿನವನ್ನು ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಂಬೇಡ್ಕರ್ ಅವರನ್ನು ಸ್ಮರಿಸಿ ಶ್ರದ್ಧಾಂಜಲಿ ಸಲ್ಲಿಸಿದರು.

ಸಂಸತ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಇನ್ನಿತರ ಗಣ್ಯರು ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವದಿಂದ ವಂದಿಸಿದರು. ಜೊತೆಗೆ ಸಂಸತ್ ಆವರಣದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಂವಿಧಾನ ಶಿಲ್ಪಿಯನ್ನು ನೆನೆದರು.

ಅಂಬೇಡ್ಕರ್ ಪರಿನಿರ್ವಾಣ ದಿನಕ್ಕೆ ಎಕ್ಸ್‌ನಲ್ಲಿ ಶುಭ ಕೋರಿರುವ ಪ್ರಧಾನಿ ಮೋದಿ, ಪೂಜ್ಯ ಬಾಬಾ ಸಾಹೇಬರು, ಭಾರತೀಯ ಸಂವಿಧಾನದ ಶಿಲ್ಪಿ ಜೊತೆಗೆ, ಶೋಷಿತರು ಮತ್ತು ವಂಚಿತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಾಮಾಜಿಕ ಸಾಮರಸ್ಯದ ಅಮರ ಹೋರಾಟಗಾರರಾಗಿದ್ದರು. ಇಂದು ಅವರ ಮಹಾಪರಿನಿರ್ವಾಣ ದಿನ, ಅವರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ. ಅಂಬೇಡ್ಕರರಿಗೆ ನನ್ನ ಗೌರವಪೂರ್ವಕ ನಮನಗಳು ಎಂದು ಬರೆದುಕೊಂಡಿದ್ದಾರೆ.

ಪರಿನಿರ್ವಾಣ ಎಂದರೆ:- ಪರಿನಿರ್ವಾಣವು ಬೌದ್ಧಧರ್ಮದಲ್ಲಿ ಮೂಲಭೂತ ಪರಿಕಲ್ಪನೆಯನ್ನು ಪ್ರತಿನಿಧಿಸುತ್ತದೆ, ಒಬ್ಬರ ಜೀವಿತಾವಧಿಯಲ್ಲಿ ಮತ್ತು ಮರಣದ ನಂತರ ನಿರ್ವಾಣ ಅಥವಾ ವಿಮೋಚನೆಯ ಸಾಧನೆಯನ್ನು ಸೂಚಿಸುತ್ತದೆ. ಸಂಸ್ಕೃತದಲ್ಲಿ, ಮರಣೋತ್ತರ ನಿರ್ವಾಣವನ್ನು ಪಡೆಯುವುದು ಅಥವಾ ಸಾವಿನ ನಂತರ ದೇಹದಿಂದ ಆತ್ಮವನ್ನು ಬಿಡುಗಡೆ ಮಾಡುವುದು ಪರಿನಿರ್ವಾಣ ಎಂದು ಕರೆಯಲ್ಪಡುತ್ತದೆ.