ಮಹಾಮಾರಿ ಕೊರೊನಾಗೆ ತುಂಬು ಗರ್ಭಿಣಿ ಬಲಿ ; ಶಸ್ತ್ರಚಿಕಿತ್ಸೆ ಮೂಲಕ ಮಗುವಿನ ಪ್ರಾಣ ಉಳಿಸಿದ ವೈದ್ಯರು!

162
firstsuddi

ಬೆಂಗಳೂರು : ಕೊರೊನಾಗೆ ಎಂಟು ತಿಂಗಳ ತುಂಬು ಗರ್ಭಿಣಿ ಬಲಿಯಾಗಿದ್ದು, ಶಸ್ತ್ರಚಿಕಿತ್ಸೆಯ ಮೂಲಕ ಮಗುವಿನ ಪ್ರಾಣ ಉಳಿಸಿರುವ  ಘಟನೆ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ ಮೂಲದ  ತುಂಬು ಗರ್ಭಿಣಿ ಅಶ್ವಿನಿ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಬಳಿಕ 4 ದಿನ ಮನೆಯಲ್ಲೇ ಇದ್ದರು. ಆದರೆ ಉಸಿರಾಟದ ಸಮಸ್ಯೆ ತೀವ್ರಗೊಂಡಾಗ ಕುಟುಂಬಸ್ಥರು ದೊಡ್ಡಬಳ್ಳಾಪುರದ ಆಸ್ಪತ್ರೆಗೆ ದಾಖಲಿಸಿದ್ದರು. ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನಲೆ ಅಲ್ಲಿನ ವೈದ್ಯರು ನಗರದ ಬೌರಿಂಗ್ ಆಸ್ಪತ್ರೆಗೆ ಕಳುಹಿಸಿದ್ದರು. ಬೌರಿಂಗ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಶ್ವಿನಿ ಅವರ ಆರೋಗ್ಯ ಗಂಭೀರ ಸ್ಥಿತಿಗೆ ತಲುಪಿದ್ದರಿಂದ, ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಮಗುವನ್ನು ಹೊರ ತೆಗೆದಿದ್ದರು. ಇದಾದ, 3 ದಿನಗಳ ನಂತರ ಚಿಕಿತ್ಸೆ ಪಲಕಾರಿಯಾಗದೇ ಅಶ್ವಿನಿ ಅವರು ಸಾವನ್ನಪ್ಪಿದ್ದಾರೆ.

ಕೇವಲ ಹಸುಗೂಸು ಮಾತ್ರವಲ್ಲದೇ, ಮೃತ ಅಶ್ವಿನಿಯ 3 ವರ್ಷದ ಇನ್ನೊಂದು ಹೆಣ್ಣು ಮಗು ಕೂಡ ತಾಯಿಯನ್ನು ಕಳೆದುಕೊಂಡು ಅನಾಥವಾಗಿದೆ. ಸದ್ಯ ವೆಂಟಿಲೇಟರ್ ನಲ್ಲಿ ಹಸುಗೂಸಿಗೆ ಚಿಕಿತ್ಸೆ ನೀಡಲಾಗುತ್ತಿದೆ.