ಬಳ್ಳಾರಿ : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೆಲವರು ಸೋಂಕಿನಿಂದ ಬಲಿಯಾಗುತ್ತಿದ್ದರೆ, ಮತ್ತೆ ಕೆಲವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ. ಅಚ್ಚರಿ ಸಂಗತಿ ಏನೆಂದರೆ ಬಳ್ಳಾರಿ ಜಿಲ್ಲೆಯಲ್ಲಿ ಶತಾಯುಷಿ ವೃದ್ಧೆಯೊಬ್ಬರು ಮಹಾಮಾರಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಹೌದು, ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ಶತಾಯುಷಿ ವೃದ್ಧೆಗೆ ಜುಲೈ.16ರಂದು ಸೋಂಕು ತಗುಲಿರುವುದು ದೃಢವಾಗಿತ್ತು. ಬಳಿಕ ವೈದ್ಯರು ವೃದ್ಧೆಯ ಮನೆಗೆ ತೆರಳಿ ಚಿಕಿತ್ಸೆಯನ್ನು ನೀಡುತ್ತಿದ್ದರು. ಈಗಾ ವೃದ್ಧೆ ಸಂಪೂರ್ಣವಾಗಿ ಸೋಂಕಿನಿಂದ ಗುಣಮುಖರಾಗಿದ್ದು, ರಾಜ್ಯದಲ್ಲಿ ಕೊರೊನಾ ಗೆದ್ದ ಮೊದಲ ಶತಾಯುಷಿ ಅಜ್ಜಿ ಎಂಬ ಹೆಗ್ಗಳಿಕೆ ವೃದ್ಧೆಯದಾಗಿದೆ.










