ಚಂಡೀಘಡ : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ಪದ್ಮಶ್ರೀ ಪುರಸ್ಕೃತ ನಿರ್ಮಲ್ ಸಿಂಗ್ ಅವರು ಇಂದು ಮೃತಪಟ್ಟಿದ್ದಾರೆ. 62 ವರ್ಷದ ನಿರ್ಮಲ್ ಸಿಂಗ್ ಅವರು ಇತ್ತೀಚೆಗೆ ವಿದೇಶದಿಂದ ಮರಳಿದ್ದರು. ಬಳಿಕ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆ, ಪಂಜಾಬ್‍ನ ಅಮೃತಸರ್ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ಬಳಿಕ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ ಮಾರ್ಚ್ 30ರಂದು ಉಸಿರಾಟದ ತೊಂದರೆ ಹಾಗೂ ತಲೆ ತಿರುಗುವುದರಿಂದ ಗುರು ನಾನಕ್ ದೇವ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದು, ಇವರಿಗೆ 2009ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.










