ಮಹಾಮಾರಿ ಕೊರೊನಾ ಸೋಂಕಿಗೆ ಎಎಸ್‍ಐ ಬಲಿ…

131
firstsuddi

ಬೆಂಗಳೂರು : ಮಹಾಮಾರಿ ಕೊರೊನಾ ಸೋಂಕಿಗೆ ಬೆಂಗಳೂರಿನ ವಿವಿ ಪುರಂ ಪೊಲೀಸ್ ಠಾಣೆಯ ಹಿರಿಯ ಎಎಸ್‍ಐ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. 55 ವರ್ಷದ ಎಎಸ್‍ಐ ಜೂನ್13 ರಂದು ತಮ್ಮ ನಿವಾಸದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದರು. ಬಳಿಕ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟೊತ್ತಿಗಾಗಲೆ ಅವರು ಮೃತಪಟ್ಟಿದ್ದರು. ಬಳಿಕ ಗಂಟಲಿನ ದ್ರವವನ್ನು ಸಂಗ್ರಹಿಸಿ ಕೊರೊನಾ ಪರೀಕ್ಷೆ ಮಾಡಿದ್ದು, ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಹಾಗೂ ಅವರ ಸಂಪರ್ಕದಲ್ಲಿದ್ದ 15ಕ್ಕೂ ಹೆಚ್ಚು ಮಂದಿಯನ್ನು ಹೋಟೆಲ್‍ನಲ್ಲಿ ಪ್ರತ್ಯೇಕವಾಗಿರಿಸಲಾಗಿದ್ದು, ವಿವಿ ಪುರಂ ಪೊಲೀಸ್ ಠಾಣೆಯ ಸುತ್ತ ಮುತ್ತಾ ರಾಸಾಯನಿಕ ಸಿಂಪಡಣೆ ಮಾಡಿ ಸೀಲ್‍ಡೌನ್ ಮಾಡಲಾಗಿದೆ.