ಬೆಂಗಳೂರು : ಮಹಾಮಾರಿ ಕೊರೊನಾ ಸೋಂಕಿಗೆ ಕಿರುತೆರೆಯ ಹಿರಿಯ ಕಲಾವಿದ ಹುಲಿವಾನ್ ಗಂಗಾಧರ್(70) ಅವರು ಬಲಿಯಾಗಿದ್ದಾರೆ. ಧಾರವಾಹಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಎರಡೇ ದಿನಕ್ಕೆ ತೀವ್ರ ಜ್ವರ ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಅವರಿಗೆ ಕೊರೊನಾ ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ದೃಡವಾಗಿದ್ದು, ಈ ವಿಷಯ ತಿಳಿದ ಅವರು ತೀವ್ರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರಿಂದ ಅವರ ಮಕ್ಕಳೊಂದಿಗೂ ಮಾತನಾಡುವುದನ್ನು ನಿಲ್ಲಿಸಿದ್ದರು. ಬಳಿಕ ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಂಗಾಧರ್ ಅವರು ಮೂವರು ಹೆಣ್ಣು ಮಕ್ಕಳು ಹಾಗೂ ಪತ್ನಿಯನ್ನು ಬಿಟ್ಟು ಅಗಲಿದ್ದು, ಇವರು ಕನ್ನಡದ ಶಿವಾಜಿನಗರ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದರು.










