ಮಹಾಮಾರಿ ಕೊರೊನಾ ಸೋಂಕಿಗೆ ರಾಜಸ್ಥಾನದ ಮಾಜಿ ಸಚಿವೆ ಕಿರಣ್ ಮಹೇಶ್ವರಿ ಅವರು ಬಲಿ…

119
firstsuddi

ಜೈಪುರ್ : ಮಹಾಮಾರಿ ಕೊರೊನಾ ಸೋಂಕಿಗೆ ರಾಜಸ್ಥಾನದ ಮಾಜಿ ಸಚಿವೆ ಹಾಗೂ ರಾಜಸಮಂದ್ ನ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಅವರು ಬಲಿಯಾಗಿದ್ದಾರೆ. ಕಿರಣ್ ಮಹೇಶ್ವರಿ ಅವರಿಗೆ ಅಕ್ಟೋಬರ್ 28ರಂದು ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಬಳಿಕ ಅವರನ್ನು ಹರಿಯಾಣದ ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಕಿರಣ್ ಮಹೇಶ್ವರಿ ಅವರು ಉನ್ನತ ಶಿಕ್ಷಣ ಸಚಿವೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಷ್ಟ್ರೀಯ ಉಪಾಧ್ಯಕ್ಷೆ ಹಾಗೂ ಬಿಜೆಪಿ ಮಹಿಳಾ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸಿದ್ದರು.
ಕಿರಣ್ ಮಹೇಶ್ವರಿ ಅವರ ನಿಧನಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.