ಮಂಡ್ಯ : ಮಹಾಮಾರಿ ಕೊರೊನಾ ಸೋಂಕಿನ ಭಯದಿಂದ ಸೋಂಕಿತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಮಳವಳ್ಳಿ ಮೂಲದ 60 ವರ್ಷದ ವೃದ್ಧ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ವೃದ್ಧ ಮಹಾಮಾರಿ ಕೊರೊನಾ ಸೋಂಕಿನಿಂದ ಕಳೆದ ಒಂದು ವಾರದಿಂದ ನಾರ್ಮಲ್ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ನಿನ್ನೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರು ಐಸಿಯುಗೆ ಶಿಫ್ಟ್ ಮಾಡುತ್ತಿದ್ದಂತೆ ವೃದ್ಧ ಶೌಚಾಲಯಕ್ಕೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.










