ಬೆಂಗಳೂರು: ನಗರದ ಮಹಾರಾಣಿ ಕ್ಲಸ್ಟರ್ ಕಾಲೇಜು ಆವರಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದೆ.
ಕಾಲೇಜು ಕ್ಯಾಂಪಸ್ನಲ್ಲೇ ಓವರ್ ಸ್ಪೀಡ್ ನಲ್ಲಿ ಕಾರು ಚಲಾಯಿಸುತ್ತಿದ್ದ ಇಂಗ್ಲಿಷ್ ಪ್ರೊ.ನಾಗರಾಜ್, ಇಬ್ಬರು ವಿದ್ಯಾರ್ಥಿನಿಯರು ಮತ್ತು ಮ್ಯೂಸಿಕ್ ಟೀಚರ್‌ಗೆ ಡಿಕ್ಕಿ ಹೊಡೆದಿದ್ದಾರೆ.
ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಅಶ್ವಿನಿ, ಪ್ರಥಮ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ನಂದು ಪ್ರಿಯಾ ಹಾಗೂ ಮ್ಯೂಸಿಕ್ ಟೀಚರ್ ಜ್ಯೋತಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿನಿ ಅಶ್ವಿನಿ ಕಾಲಿಗೆ ತೀವ್ರ ಗಾಯಗಳಾಗಿರುವ ಕಾರಣ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲು ತಯಾರಿ ನಡೆದಿದೆ. ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










