ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ರಿಟ್ ಅರ್ಜಿ ತೀರ್ಪನ್ನು ನಾಳೆಗೆ ಕಾಯ್ದಿರಿಸಿದ ಸುಪ್ರೀಂ…

173
firstsuddi

ನವದೆಹಲಿ : ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿರುವುದನ್ನು ಪ್ರಶ್ನಿಸಿ ಎನ್.ಸಿ.ಪಿ, ಶಿವಸೇನೆ ಹಾಗೂ ಕಾಂಗ್ರೆಸ್ ಸಲ್ಲಿಸಿದ ರಿಟ್ ಅರ್ಜಿ ತೀರ್ಪನ್ನು ಸುಪ್ರೀಂ ಕೋರ್ಟ್ ನಾಳೆಗೆ ಕಾಯ್ದಿರಿಸಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ರಾತ್ರೋ ರಾತ್ರಿ ರಾಷ್ಟ್ರಪತಿ ಆಳ್ವಿಕೆಯನ್ನು ವಾಪಾಸ್ ಪಡೆದು ಬಹುಮತವಿಲ್ಲದೆ ಸರ್ಕಾರ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ಶಿವಸೇನೆ, ಎನ್.ಸಿ.ಪಿ ಹಾಗೂ ಕಾಂಗ್ರೆಸ್ ಸುಪ್ರೀಂ ಕೋರ್ಟ್‍ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಗೆ ಸಂಬಂಧಿಸಿದಂತೆ ನಿನ್ನೆ ಮತ್ತು ಇಂದು ವಿಚಾರಣೆ ನಡೆಸಿದ ನ್ಯಾ.ಎನ್.ವಿ. ರಮಣ ಅವರ ನೇತೃತ್ವದ ತ್ರಿಸದಸ್ಯ ಪೀಠ ವಾದ-ಪ್ರತಿವಾದವನ್ನು ಆಲಿಸಿ ತೀರ್ಪನ್ನು ನಾಳೆ ಬೆಳಿಗ್ಗೆ 10:30ಕ್ಕೆ ಕಾಯ್ದಿರಿಸಿದೆ.