ಮಹಾರಾಷ್ಟ್ರ : ಜೂನ್ 1ರವರೆಗೆ ಲಾಕ್ ಡೌನ್ ವಿಸ್ತರಣೆ…

173
firstsuddi

ಮುಂಬೈ : ಕೋವಿಡ್ ನಿಯಂತ್ರಣ ಮಾಡುವ ಸಲುವಾಗಿ ಮಹಾರಾಷ್ಟ್ರ ಸರ್ಕಾರ ಈಗಿರುವ ಲಾಕ್ ಡೌನ್ ನ್ನು ಜೂನ್ 1ರವರೆಗೆ ವಿಸ್ತರಿಸಿದ್ದು, ಜೂನ್ 1ರ ಬೆಳಗ್ಗೆ 7 ಗಂಟೆಯವರೆಗೆ ಅನ್ವಯವಾಗಲಿದೆ.

ಮಹಾರಾಷ್ಟ್ರಕ್ಕೆ ಪ್ರವೇಶಿಸುವವರು ನೆಗೆಟಿವ್ ಆರ್ ಟಿ-ಪಿಸಿಆರ್ ವರದಿ ಹೊಂದಿರುವುದು ಕಡ್ಡಾಯವಾಗಿದೆ. ಈ ಹಿಂದೆ ಕೊರೋನಾ ಪ್ರಕರಣ ಹೆಚ್ಚಾಗಿರುವ ರಾಜ್ಯಗಳಿಂದ ಬರುವವರಿಗೆ ಮಾತ್ರ ಕಡ್ಡಾಯವಾಗಿತ್ತು, ಆದರೆ ಇನ್ನು ಮುಂದೆ ದೇಶದ ಯಾವುದೇ ಭಾಗಗಳಿಂದ ಮಹಾರಾಷ್ಟ್ರ ಪ್ರವೇಶಿಸುವವರು ಕಡ್ಡಾಯವಾಗಿ ಆರ್ ಟಿ-ಪಿಸಿಆರ್ ನೆಗೆಟಿವ್ ವರದಿಯನ್ನು ಹೊಂದಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹಿಂದೆ ಘೋಷಿಸಿದ್ದ ಲಾಕ್ ಡೌನ್ ಮೇ.15 ರವರೆಗೂ ಜಾರಿಯಲ್ಲಿತ್ತು. ಇದೀಗ ಮತ್ತಷ್ಟು ದಿನ ವಿಸ್ತರಿಸಲಾಗಿದೆ.