ಮುಂಬೈ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ 1000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಮುಂಬೈನ ನಾರಿಮನ್ ಪಾಯಿಂಟ್ ನಲ್ಲಿರುವ ನಿರ್ಮಲ್ ಟವರ್ ಸೇರಿದಂತೆ ಒಟ್ಟು ಸಾವಿರ ಕೋಟಿ ಮೌಲ್ಯದ ಆಸ್ತಿಯನ್ನು ಐಟಿ ಇಲಾಖೆ ಜಪ್ತಿ ಮಾಡಿದೆ. ಅಲ್ಲದೇ ಅಜಿತ್ ಪವಾರ್ ಗೆ ನೋಟಿಸ್ ಕೂಡ ನೀಡಿದೆ ಎನ್ನಲಾಗಿದೆ.
ದಕ್ಷಿಣ ದೆಹಲಿಯಲ್ಲಿರುವ 20 ಕೋಟಿ ರೂ ಮೌಲ್ಯದ ಫ್ಲ್ಯಾಟ್, ನಿರ್ಮಲ್ ಹೌಸ್ ನಲ್ಲಿರುವ ಸುಮಾರು 25 ಕೋಟಿ ರೂ.ಬೆಲೆಯ ಕಚೇರಿ, ಸುಮಾರು 600 ಕೋಟಿ ರೂ.ಮೌಲ್ಯದ ಸಕ್ಕರೆ ಕಾರ್ಖಾನೆ, 250 ಕೋಟಿ ರೂ.ಬೆಲೆಯ ರೆಸಾರ್ಟ್ ಮತ್ತು ಮಹಾರಾಷ್ಟ್ರದ 27 ವಿವಿಧ ಪ್ರದೇಶಗಳಲ್ಲಿರುವ 500 ಕೋಟಿ ರೂ.ಮೌಲ್ಯದ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.










