ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ವಿರುದ್ಧ ದೂರು ದಾಖಲು…

15
firstsuddi

ಮುಂಬೈ : ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಅವರಿಗೆ ಕೋವಿಡ್ -19 ದೃಢಪಟ್ಟಿದ್ದರೂ, ಉದ್ದವ್ ತಮ್ಮ ಬೆಂಬಲಿಗರನ್ನು ಭೇಟಿ ಮಾಡುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ರಾಷ್ಟ್ರೀಯ ಕಾರ್ಯದರ್ಶಿ ತಜೀಂದರ್ ಪಾಲ್ ಸಿಂಗ್ ಬಗ್ಗಾ ಮಲಬಾರ್ ಹಿಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಉದ್ಧವ್ ಠಾಕ್ರೆ ಅವರಿಗೆ ಕೋವಿಡ್ ಇರುವುದಾಗಿ ಸ್ವತಃ ಅವರೇ ಫೇಸ್ ಬುಕ್ ಲೈವ್ ನಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲ ವಿವಿಧ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿವೆ. ಹೀಗಾಗಿ ಕೋವಿಡ್ ನಿಯಮ ಉಲ್ಲಂಘಿಸಿರುವ ಮಹಾರಾಷ್ಟ್ರ ಸಿಎಂ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಬಗ್ಗಾ ಒತ್ತಾಯಿಸಿದ್ದಾರೆ.