ಚಿಕ್ಕಬಳ್ಳಾಪುರ : ಮಹಿಳಾ ಟೆಕ್ಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಪ್ರಶಾಂತ್ ನಗರದಲ್ಲಿ ನಡೆದಿದೆ.
ನವ್ಯಾ ಎಸ್.ಆರ್(23) ಮೃತ ಟೆಕ್ಕಿ. ಪ್ರಶಾಂತ ನಗರದ ಮನೆಯ ಮೂರನೇ ಅಂತಸ್ತಿನ ಸ್ಟೋರ್ ರೂಂನಲ್ಲಿ ನವ್ಯ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಇತ್ತ ಮೃತಳ ಸಂಬಂಧಿಕರು ಗಂಡ ಚೇತನ್ ಹಾಗೂ ಅತ್ತೆ ಮಾವನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ. ತಮ್ಮ ಮಗಳ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿ ತದನಂತರ ನೇಣು ಹಾಕಿದ್ದಾರೆ ಅಂತ ಆರೋಪಿಸಿದ್ದಾರೆ. ಸದ್ಯ ಚಿಕ್ಕಬಳ್ಳಾಪುರ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.










