ಮಹಿಳೆಗೆ ಆವಾಜ್ – ಕ್ಷಮೆ ಕೇಳಲು ಸಿದ್ಧ: ಅರವಿಂದ್ ಲಿಂಬಾವಳಿ.

51
firstsuddi

ಬೆಂಗಳೂರು : ಮಹಿಳೆಗೆ ಶಾಸಕ ಅರವಿಂದ್ ಲಿಂಬಾವಳಿ ಆವಾಜ್ ಹಾಕಿರುವುದು ಚರ್ಚೆಗೆ ಗುರಿಯಾಗಿದ್ದು, ಮಹಿಳೆಯ ಕ್ಷಮೆ ಕೇಳುವಂತೆ ಕಾಂಗ್ರೆಸ್ ಆಗ್ರಹಿಸಿದೆ. ಕಾಂಗ್ರೆಸ್ ಟ್ವೀಟ್ ಬೆನ್ನಲ್ಲೇ ಅರವಿಂದ್ ಲಿಂಬಾವಳಿ ಟ್ವೀಟ್ ಮಾಡಿ, ಈ ಬಗ್ಗೆ ಕ್ಷಮೆ ಕೇಳಲು ಸಿದ್ಧನಿದ್ದೇನೆ. ಆದರೆ, ನಿಮ್ಮ ಪಕ್ಷದ ಇದೇ ಕಾರ್ಯಕರ್ತೆ ರೂತ್ ಸಗಾಯ್ ಮೇರಿ ಎಷ್ಟೋ ವರ್ಷಗಳಿಂದ ರಾಜಕಾಲುವೆ ಒತ್ತುವರಿ ಮಾಡಿ, ಜನರಿಗೆ ಸಮಸ್ಯೆಯುಂಟು ಮಾಡಿದ್ದಾರಲ್ಲ, ಅದನ್ನು ಖಾಲಿ ಮಾಡಲು ಹೇಳಿ. ನಿಮ್ಮ ಕಾರ್ಯಕರ್ತೆಯ ಮೊಂಡುತನವನ್ನು ಇಲ್ಲಿಗೇ ನಿಲ್ಲಿಸಲು ಹೇಳಿ ಎಂದು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಟ್ವೀಟ್‍ನಲ್ಲೇನಿದೆ? : ಶಾಸಕ ಲಿಂಬಾವಳಿಯ ವರ್ತನೆ ಬಿಜೆಪಿಯ ಜನವಿರೋಧಿ ಧೋರಣೆ. ಇದು ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ. ದರ್ಪ ತೋರಿದ ಮಾತ್ರಕ್ಕೆ ನಿಮ್ಮ ಅಯೋಗ್ಯತೆ ಮರೆಯಾಗುವುದಿಲ್ಲ. ಬೊಮ್ಮಾಯಿ ಅವರೇ, ನಿಮ್ಮ ಶಾಸಕರ ಈ ವರ್ತನೆ ನಿಮಗೆ ಸಹ್ಯವೇ?

ಉದ್ಧಾರಕರಂತೆ ಕೇವಲ ಬೂಟಾಟಿಕೆಯ ಮಾತಾಡುವ ಬಿಜೆಪಿಗರೇ, ನಿಮ್ಮ ಪಕ್ಷದ ಅರವಿಂದ ಲಿಂಬಾವಳಿಯವರು ಒಬ್ಬ ಜನಪ್ರತಿನಿಧಿಯಾಗಿ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡ ರೀತಿ ಅಕ್ಷಮ್ಯ. ಇಂಥ ಮಹಿಳಾ ವಿರೋಧಿ ನಡೆಯ ವಿರುದ್ಧ ಮಾತಾಡುವ ಧೈರ್ಯ ತೋರುತ್ತೀರಾ? ಅರವಿಂದ ಲಿಂಬಾವಳಿಯವರು ಆ ಹೆಣ್ಣಿನ ಕ್ಷಮೆ ಕೇಳುತ್ತಾರಾ? ಎಂದು ಪ್ರಶ್ನಿಸಿದೆ.

ಏನಿದು ಪ್ರಕರಣ?: ಶಾಸಕ ಅರವಿಂದ್ ಲಿಂಬಾವಳಿ ಮಳೆಯಿಂದ ಹಾನಿಗೊಳಗಾದ ಪ್ರದೇಶವಾದ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಮನವಿ ಸಲ್ಲಿಸಲು ಆಗಮಿಸಿದ್ದರು. ಈ ವೇಳೆ ಮಹಿಳೆಗೆ ನಿನಗೆ ಮಾನ ಮರ್ಯಾದೆ ಇದ್ಯಾ? ನಿನಗೆ ನಾಚಿಕೆ ಆಗಲ್ವಾ ಎಂದು ಏರು ದನಿಯಲ್ಲಿ ಆವಾಜ್ ಹಾಕಿದ್ದಾರೆ.