ಮಹಿಳೆಯರ ಸೀರೆ ಎಳೆದವನಿಗೆ ಹಿಗ್ಗಾಮುಗ್ಗ ಥಳಿಸಿದ ಸ್ಥಳೀಯರು…

108
firstsuddi

ರಾಯಚೂರು : ಮಹಿಳೆಯರ ಸೀರೆ ಎಳೆದವನಿಗೆ ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಅಪರಿಚಿತ ವ್ಯಕ್ತಿಯೋರ್ವ ನಗರದ ಆಶಾಪುರ ರಸ್ತೆಯಲ್ಲಿ ಓಡಾಡುವ ಮಹಿಳೆಯರ ಸೀರೆ ಎಳೆದು ಕಿರುಕುಳ ನೀಡುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯರು ವ್ಯಕ್ತಿಯನ್ನ ಹಿಡಿದು ಹಿಗ್ಗಾಮುಗ್ಗ ಥಳಿಸಿ ಮರಕ್ಕೆ ಕಟ್ಟಿಹಾಕಿದ್ದಾರೆ. ಕೊನೆಗೆ ವ್ಯಕ್ತಿಯನ್ನ ನಗರದ ಪಶ್ಚಿಮ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.