ಮಹಿಳೆಯೊಂದಿಗೆ ಅಕ್ರಮ ಸಂಬಂಧ – ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಕಾನ್ ಸ್ಟೇಬಲ್ ಗೆ ಹಿಗ್ಗಾಮುಗ್ಗ ಏಟು…

75
firstsuddi

ಯಾದಗಿರಿ : ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾನ್ ಸ್ಟೇಬಲ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು, ಮಹಿಳೆಯ ಕುಟುಂಸ್ಥರು ಹಿಗ್ಗಾಮುಗ್ಗ ಥಳಿಸಿದ ಘಟನೆ ನಗರದಲ್ಲಿ ನಡೆದಿದೆ.

ಥಳಿತಕ್ಕೊಳಗಾದ ಪೊಲೀಸ್ ಕಾನ್ ಸ್ಟೇಬಲ್ ನನ್ನು ಗುರಪ್ಪ ಎಂದು ಗುರುತಿಸಲಾಗಿದೆ. ನಗರದ ಎಸ್ಪಿ ಕಚೇರಿ ಸಮೀಪದಲ್ಲಿ ವಾಸವಾಗಿದ್ದ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಕಳೆದ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆ ಮನೆಗೆ ಬಂದಿದ್ದ ಕಾನ್ ಸ್ಟೇಬಲ್, ರೆಡ್ ಹ್ಯಾಂಡ್ ಆಗಿ ಕುಟುಂಬಸ್ಥರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಇದರಿಂದ ರೊಚ್ಚಿಗೆದ್ದ ಮಹಿಳೆಯ ಕುಟುಂಬಸ್ಥರು ಆತನ ಕೈಕಾಲು ಕಟ್ಟಿ, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನನ್ನನ್ನು ಬಿಟ್ಟು ಬಿಡಿ ಅಂತ ಅಂಗಲಾಚಿದರೂ ಬಿಡದ ಜನ, ಮನಬಂದಂತೆ ಥಳಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಕಾನ್ ಸ್ಟೇಬಲ್ ಗುರಪ್ಪನ್ನನ್ನು ರಕ್ಷಣೆ ಮಾಡಿದ್ದಾರೆ. ಘಟನೆ ನಂತರ ಗುರಪ್ಪ ವಿರುದ್ಧ ಮಹಿಳೆಯು ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ. ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಗುರಪ್ಪನ್ನನ್ನು ವಶಕ್ಕೆ ಪಡೆದಿದ್ದಾರೆ.