ಮಹಿಳೆಯೊಂದಿಗೆ ಅನುಚಿತ ವರ್ತನೆ ಆರೋಪ – ಸಾರಿಗೆ ಬಸ್ ನಿರ್ವಾಹಕನ ಮೇಲೆ ಹಲ್ಲೆ…

50
firstsuddi

ಚಿತ್ರದುರ್ಗ: ಸಾರಿಗೆ ಬಸ್ ನಿರ್ವಾಹಕನೊಬ್ಬ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಸಿದ್ದಕ್ಕೆ ಆಕೆಯ ಸಂಬಂಧಿಕರು ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ಜಿಲ್ಲೆಯ ಚಳ್ಳಕೆರೆ ಪಟ್ಟಣದ ನೆಹರು ವೃತ್ತದ ಬಳಿ ನಡೆದಿದೆ.

ಹಲ್ಲೆಗೊಳಗಾದ ನಿರ್ವಾಹಕನನ್ನು ಚಂದ್ರೇಗೌಡ ಎಂದು ಗುರುತಿಸಲಾಗಿದೆ. ನಿನ್ನೆ ಚಳ್ಳಕೆರೆಯಿಂದ ಇದೇ ಬಸ್​​ನಲ್ಲಿ ಓರ್ವ ಮಹಿಳೆಯೊಬ್ಬರು ಚಳ್ಳಕೆರೆಯಿಂದ ದಾಬಸ್ ಪೇಟೆಗೆ ತೆರಳುತ್ತಿದ್ದರು. ದಾಬಸ್ ಪೇಟೆಯಲ್ಲಿ ಬಸ್ ನಿಲ್ಲಿಸುವಂತೆ ಮಹಿಳೆ ಹೇಳಿದ್ದಳು. ಆದರೆ ಅಲ್ಲಿ ಬಸ್ ನಿಲ್ಲಿಸದೇ ನಿರ್ವಾಹಕ ನಿಯಮದಂತೆ ಮೆಜಸ್ಟಿಕ್‍ನಲ್ಲಿ ಬಸ್ ನಿಲ್ಲಿಸಿದ್ದಾನೆ. ಇದನ್ನು ಪ್ರಶ್ನಿಸಿದ ಮಹಿಳೆ ಜೊತೆ ನಿರ್ವಾಹಕ ಅನುಚಿತ ವರ್ತನೆ ಮಾಡಿದ್ದಾರೆಂಬ ಆರೋಪದ ಮೇಲೆ ಇಂದು ಚಳ್ಳಕೆರೆ ನಿಲ್ದಾಣ ಬಳಿ ನಿರ್ವಾಹಕನಿಗೆ ಮಹಿಳಾ ಸಂಬಂಧಿಕರು ಸೇರಿ ಥಳಿಸಿದ್ದಾರೆ.

ಹಲ್ಲೆಗೊಳಗಾದ ಬಸ್ ನಿರ್ವಾಹಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸಾರಿಗೆ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಘಟನೆ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.