ಮಹಿಳೆಯ ಒಂದೂವರೆ ಲಕ್ಷ ಹಣ ಕದ್ದು ಕಳ್ಳರು ಪರಾರಿ…

127
firstsuddi

ರಾಯಚೂರು : ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಹಣವನ್ನು ಕದ್ದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಗಂಜ್ ರಸ್ತೆಯ ರಿಲಾಯನ್ಸ್ ಮಾರ್ಟ್ ಮುಂಭಾಗದಲ್ಲಿ ನಡೆದಿದೆ. ಹೇಮಾವತಿ ಹಣ ಕಳೆದುಕೊಂಡ ಮಹಿಳೆ. ಮಹಿಳೆ ಪ್ಲಾಟ್ ಖರೀದಿಸಲು ಯೂನಿಯನ್ ಬ್ಯಾಂಕ್ ನಿಂದ ಒಂದೂವರೆ ಲಕ್ಷ ಹಣ ಡ್ರಾ ಮಾಡಿಕೊಂಡು ತೆರಳುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಖದೀಮರು ಮಹಿಳೆಯ ಕೈಯಲ್ಲಿದ್ದ ಬ್ಯಾಗ್ ಅನ್ನು ಕಿತ್ತು ಪರಾರಿಯಾಗಿದ್ದಾರೆ. ಕಳ್ಳರು ಬ್ಯಾಗ್ ಕಸಿದುಕೊಂಡು ಹೋಗುತ್ತಿರುವ ದೃಶ್ಯ ಅಲ್ಲೇ ಇದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಈ ಕುರಿತು ಸದರ ಬಜಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.