ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 75ನೇ ವರ್ಷದ ಹುಟ್ಟುಹಬ್ಬ, ಸ್ಮಾರಕಕ್ಕೆ ತೆರಳಿ ಪುಷ್ಪನಮನ ಸಲ್ಲಿಸಿದ ಕಾಂಗ್ರೆಸ್ ನಾಯಕರು…

225
firstsuddi

ನವದೆಹಲಿ : ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 75ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ದೆಹಲಿಯ ರಾಜೀವ್ ಗಾಂಧಿ ಸ್ಮಾರಕಕ್ಕೆ ಕಾಂಗ್ರೆಸ್‍ನ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ವಾದ್ರಾ ಹಾಗೂ ಮನಮೋಹನ್ ಸಿಂಗ್ ಅವರು ಸೇರಿದಂತೆ ಮೊದಲಾದವರು ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ಹಾಗೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಉಪಮುಖ್ಯಮಂತ್ರಿ ಹಮೀದ್ ಅನ್ಸಾರಿ, ಭೂಪಿಂದರ್ ಸಿಂಗ್ ಹೂಡಾ ಅಹ್ಮದ್ ಪಟೇಲ್, ಗುಲಾಂ ನಬಿ ಆಜಾದ್ ಸೇರಿದಂತೆ ಮೊದಲಾದವರು ತಮ್ಮ ನಾಯಕನನ್ನು ನೆನೆದು ಗೌರವ ನಮನ ಸಲ್ಲಿಸಿದರು. ಈ ವೇಳೆ ಪ್ರಿಯಾಂಕ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಹಾಗೂ ಮಗಳು ಮಿರಯಾ ವಾದ್ರಾ ಭಾಗಿಯಾಗಿದ್ದರು.