ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಅವರಿಂದ ಶುಭಾಶಯ…

165
firstsuddi

ಬೆಂಗಳೂರು : ಇಂದು ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ ದೇವೇಗೌಡ ಅವರು ತಮ್ಮ 88ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆ, ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವಿಟರ್ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಶ್ರೀರಾಮುಲು ಅವರು ಸೇರಿದಂತೆ ವಿವಿಧ ಗಣ್ಯರು ದೇವೇಗೌಡ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು, ಟ್ವೀಟ್ ಮಾಡಿ, “ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಆಯಸ್ಸು ಮತ್ತು ಆರೋಗ್ಯವನ್ನು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿತೂರಪ್ಪ ಅವರು ಟ್ವೀಟ್ ಮಾಡಿ, “ಭಾರತದ ಪ್ರಧಾನಮಂತ್ರಿಗಳಾಗಿ, ಕರ್ನಾಟಕದ ಮುಖ್ಯಮಂತ್ರಿಗಳಾಗಿ ಮಹತ್ವದ ಸೇವೆ ಸಲ್ಲಿಸಿರುವ, ಜನತಾದಳ (ಜಾತ್ಯತೀತ) ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ರಾಜಕೀಯ ಮುತ್ಸದ್ಧಿ ಸನ್ಮಾನ್ಯ ಎಚ್.ಡಿ ದೇವೇಗೌಡ ರವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಕಾಮನೆಗಳು. ದೇವರ ಅನುಗ್ರಹ ತಮ್ಮ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ.