ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್…

91
firstsuddi

ಬೆಂಗಳೂರು : ಅನಾರೋಗ್ಯ ಹಿನ್ನಲೆ ಕಳೆದ 5 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್.ಡಿ. ದೇವೇಗೌಡ ಅವರು ಇಂದು ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆ ಮುಖ್ಯಸ್ಥ ಸುದರ್ಶನ್ ಬಲ್ಲಾಳ್ ಅವರು ಹೂಗುಚ್ಚ ನೀಡುವ ಮೂಲಕ ಆಸ್ಪತ್ರೆಯಿಂದ ಬೀಳ್ಕೋಡುಗೆ ನೀಡಿದ್ದಾರೆ.

ಮಾರ್ಚ್ 31ರಂದು ಕೊರೊನಾ ಪಾಸಿಟಿವ್ ಹಿನ್ನಲೆ ದೇವೇಗೌಡ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಈ ಬಗ್ಗೆ ಮಣಿಪಾಲ್ ಆಸ್ಪತ್ರೆ ವೈದ್ಯ ಡಾ. ಸುದರ್ಶನ್ ಬಲ್ಲಾಳ್ ಅವರು ಸ್ಪಷ್ಟನೆ ನೀಡಿದ್ದು, ಎಚ್.ಡಿ. ದೇವೇಗೌಡರಿಗೆ ಕೊರೊನಾ ನೆಗೆಟಿವ್ ಇದೆ. ಜ್ವರ ಇರುವುದಕ್ಕೆ ಮಾತ್ರ ದೇವೇಗೌಡರು ಅಡ್ಮಿಟ್ ಆಗಿದ್ದಾರೆ. ಆದರೆ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಮಾತ್ರ ಪಾಸಿಟಿವ್ ಬಂದಿದ್ದು, ಇಬ್ಬರಿಗೂ ಚಿಕಿತ್ಸೆ ನೀಡಲಾಗಿತ್ತು. ಇದೀಗ ಹೆಚ್.ಡಿ.ದೇವೇಗೌಡರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ತಿಳಿಸಿದ್ದಾರೆ.