ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಸಹೋದರ ಎಸ್,ಎಂ ಶಂಕರ್ ವಿಧಿವಶ…

214
firstsuddi

ಮಂಡ್ಯ : ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಸಹೋದರ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಂ ಶಂಕರ್(82) ವಿಧಿವಶರಾಗಿದ್ದು, ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದು, ಶಂಕರ್ ಅವರ ಅಂತ್ಯಸಂಸ್ಕಾರ ತಮ್ಮ ಸ್ವಗ್ರಾಮವಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ನಡೆಯಲಿದೆ.