ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲು…

209
firstsuddi

ಬೆಂಗಳೂರು : ಅಧಿಕ ರಕ್ತದೊತ್ತಡದಿಂದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪಚುನಾವಣೆ ವೇಳೆ ನಿರಂತರ ಪ್ರಚಾರ ಕಾರ್ಯಕ್ರಮದಲ್ಲ ಸಕ್ರೀಯವಾಗಿದ್ದ ಸಿದ್ದರಾಮಯ್ಯ ಅವರು ಸ್ವಲ್ಪ ದಣಿದಿದ್ದರಿಂದ ರಕ್ತದೊತ್ತಡ ಹೆಚ್ಚಾಗಿದ್ದು, ಹಾಗೂ ಸ್ವಲ್ಪ ಪ್ರಮಾಣದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು, ಹೀಗಾಗಿ ಅವರನ್ನು ಇಂದು ಬೆಳಿಗ್ಗೆ 6:30 ರ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿದ್ದರಾಮಯ್ಯ ಅವರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಅವರನ್ನು ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡುವ ಅವಶ್ಯಕತೆ ಇಲ್ಲ. ತಪಾಸಣೆ ಮಾಡಿ ಮನೆಗೆ ವಾಪಸ್ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.