ಮಂಗಳೂರು : ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಉದ್ಯಮಿ ಬಿ.ಎಂ ಬಾಷಾ ಮನೆಗೆ ವಿಶ್ವಹಿಂದೂ ಪರಿಷತ್, ಬಜರಂಗದಳ ಮುತ್ತಿಗೆ ಹಾಕಲು ಯತ್ನಿಸಿದ್ದು, ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಸೇರಿದಂತೆ ಹಲವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಎಚ್ ಪಿ ಹಾಗೂ ಬಜರಂಗದಳ ಕಾರ್ಯಕರ್ತರು “ಜನಜಾಗೃತಿ” ಹೆಸರಲ್ಲಿ ರಸ್ತೆಗಳಲ್ಲಿ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದರು. ನಂತರ ಬಿ.ಎಂ. ಬಾಷಾ ಅವರ ಮನೆಯ ಗೇಟ್ ಬಳಿ ತೆರಳಿ ಮನೆಗೆ ನುಗ್ಗಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಸದ್ಯ ಮನೆಯ ಸುತ್ತಮುತ್ತ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.










