ಮಾಜಿ ಶಾಸಕ ಬಿ.ಆರ್ ಪಾಟೀಲ್ ಕ್ಷಮೆ ಕೋರಿದ ಡಿ.ಕೆ ಶಿವಕುಮಾರ್..ಯಾಕೆ ಗೊತ್ತಾ?

74
firstsuddi

ಕಲಬುರಗಿ : ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಆಳಂದ ಮಾಜಿ ಶಾಸಕ ಬಿ.ಆರ್ ಪಾಟೀಲ್ ಅವರನ್ನ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದಕ್ಕೆ ಸಂಬಂಧಿಸಿದಂತೆ ಇದೀಗ ಡಿ ಡಿ.ಕೆ ಶಿವಕುಮಾರ್ ಕ್ಷಮೆ ಯಾಚಿಸಿದ್ದಾರೆ.

ಡಿ.ಕೆ ಶಿವಕುಮಾರ್ ವರ್ತನೆಗೆ ಆಕ್ರೋಶಗೊಂಡ ಬಿ.ಆರ್ ಪಾಟೀಲ್ ಹಾಗೂ ಅವರ ಅಭಿಮಾನಿಗಳು ಕ್ಷಮೆಯಾಚಿಸುವಂತೆ ಪಟ್ಟು ಹಿಡಿದಿದ್ದರು. ಇದರ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಅವರು ಬಿ.ಆರ್ ಪಾಟೀಲ್ ಅವರಿಗೆ ಕ್ಷಮೆ ಕೋರಿ ಪತ್ರ ಬರೆದಿದ್ದಾರೆ.

ಮೇಕೆದಾಟು ಪಾದಯಾತ್ರೆಯ ಸಂದರ್ಭದಲ್ಲಿ ನಾನು ತಮ್ಮನ ತಳ್ಳಿ ಅವಮಾನ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಕಂಡು ನನಗೆ ತುಂಬಾ ಖೇದವಾಗಿದೆ. ತಮ್ಮಂತಹ ಹಿರಿಯರ ಜೊತೆ ಈ ರೀತಿ ಅನುಚಿತವಾಗಿ ನಡೆದುಕೊಳ್ಳುವುದನ್ನು ನಾನು ಕನಸು-ಮನಸಿನಲ್ಲಿಯೂ ಎಣಿಸಿಕೊಳ್ಳಲು ಸಾಧ್ಯವಿಲ್ಲ. ಈ ಘಟನೆ ನಡೆದಿರುವುದು ನನಗೆ ಅರಿವಿಲ್ಲ. ಜನರ ನೂಕುನುಗಲ್ಲಿನಲ್ಲಿ ಅಚಾತುರ್ಯ ನಡೆದಿದ್ದರೆ ನಾನು ವಿಷಾಧಿಸುತ್ತೇನೆ ಎಂದಿದ್ದಾರೆ.