ಮಾಜಿ ಶಿಕ್ಷಣ ಸಚಿವ ಪ್ರಭಾಕರ ರಾಣೆ ನಿಧನ…

63
firstsuddi

ಕಾರವಾರ : ರಾಜ್ಯದ ಮಾಜಿ ಶಿಕ್ಷಣ ಸಚಿವ ಪ್ರಭಾಕರ ರಾಣೆ(81) ಅವರು ಶಿಕ್ಷಕರ ದಿನದಂದೇ ವಿಧಿವಶರಾಗಿದ್ದಾರೆ.

ಪ್ರಭಾಕರ ರಾಣೆ ಅವರಿಗೆ ತಿಂಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ನಂತರ ಅವರಿಗೆ ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಕೊಂಚ ಚೇತರಿಸಿಕೊಂಡು ಸದ್ಯ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ, ಇಂದು ಮಧ್ಯಾಹ್ನ 1.30ರ ಸುಮಾರಿಗೆ ರಾಣೆ ಅವರು ಕೊನೆಯುಸಿರೆಳೆದಿದ್ದಾರೆ.

ಕಾರವಾರ- ಜೊಯಿಡಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಾಣೆ, ಗ್ರಂಥಾಲಯ ಮತ್ತು ವಯಸ್ಕರ ಶಿಕ್ಷಣ ಸಚಿವರಾಗಿದ್ದರು.

ಉತ್ತರ ಕನ್ನಡದ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ್ದ ಮಾಜಿ ಶಿಕ್ಷಣ ಸಚಿವ ಪ್ರಭಾಕರ ರಾಣೆ ಅವರು, ಅದೇ ಸಂಸ್ಥೆಯ ಅಧ್ಯಕ್ಷರೂ ಆದರು. ಬಾಪೂಜಿ ಗ್ರಾಮೀಣ ವಿಕಾಸ ಸಂಸ್ಥೆ ಅಡಿ ಕಾರವಾರ, ಜೋಯಿಡಾ ಭಾಗದಲ್ಲಿ ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜುಗಳನ್ನು ಆರಂಭಿಸಿದರು.