ಮಾಜಿ ಸಚಿವೆ, ನಟಿ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ…

162
firstsuddi

ಬಾಗಲಕೋಟೆ : ಮಾಜಿ ಸಚಿವೆ ಶ್ರೀಮತಿ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲ್ಲೂಕಿನ ರಬಕವಿ ವಿದ್ಯಾನಗರದಲ್ಲಿರುವ ಉಮಾಶ್ರೀ ಅವರ ನಿವಾಸವಿದ್ದು, ಮನೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿದ ದುಷ್ಕರ್ಮಿಗಳು ಮನೆಯ ಬಾಗಿಲು ಮುರಿದು ಮನೆಯೊಳಗೆ ನುಗ್ಗಿ ಅಪಾರ ಪ್ರಮಾಣದ ವಸ್ತು ಹಾಗೂ ಹಣವನ್ನು ಕದ್ದು ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಉಮಾಶ್ರೀ ಅವರು ಸದ್ಯ ಬೆಂಗಳೂರಿನ ನಿವಾಸದಲ್ಲಿದ್ದು, ಅವರು ಆಗಮಿಸಿ ಪರಿಶೀಲನೆ ನಡೆಸಿದ ಬಳಿಕ ಎಷ್ಟು ಹಣ ಹಾಗೂ ಚಿನ್ನಾಭರಣಗಳು ಕಳ್ಳತನವಾಗಿದೆ ಎಂಬುವುದು ತಿಳಿಯಲಿದೆ. ಮನೆಯಲ್ಲಿ ಕಳ್ಳತನವಾಗಿರುವ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ತೇರದಾಳ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.