ಮಾಜಿ ಸಚಿವ ಎಂ.ರಘುಪತಿ ನಿಧನ…

71
firstsuddi

ಬೆಂಗಳೂರು : ಮಾಜಿ ಸಚಿವ ಎಂ.ರಘುಪತಿ ಅವರು ಇಂದು ಬೆಳಗಿನ ಜಾವ 3 ಗಂಟೆಗೆ ತಮ್ಮ ಮಲ್ಲೇಶ್ವರಂನಲ್ಲಿರುವ ನಿವಾಸದಲ್ಲಿ ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊಂಚ ಗುಣಮುಖರಾಗಿ ನಿವಾಸಕ್ಕೆ ಹಿಂದಿರುಗಿದ್ದರು. ಆದರೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಇಂದು ಮಲ್ಲೇಶ್ವರಂನ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸಾರ್ವಜನಿಕ ವ್ಯವಸ್ಥೆಯನ್ನು ಮಾಡಲಾಗಿದೆ. ನಾಳೆ ಬೆಳಗ್ಗೆ ಅಂತಿಮ ವಿಧಿವಿಧಾನ ನಡೆಯಲಿದೆ. ಎಂ. ರಘುಪತಿ ಅಗಲಿಕೆಗೆ ರಾಜಕೀಯ ನಾಯಕರು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ಎಂ.ರಘುಪತಿ ಅವರು ಶಿವಾಜಿ ನಗರ ಮತ್ತು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಅಯ್ಕೆಯಾಗಿದ್ದರು. ರಾಮಕೃಷ್ಣ ಹೆಗಡೆ ಅವರ ಸಿಎಂ ಆಗಿದ್ದಾಗ ಶಿಕ್ಷಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.