ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ…

50
firstsuddi

ಹುಬ್ಬಳ್ಳಿ: ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ನಿಧನರಾಗಿದ್ದಾರೆ.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಎಸ್‌.ಎಂ ಕೃಷ್ಣ ಸರ್ಕಾರದ ಸಂಪುಟದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಜಬ್ಬಾರ್ ಖಾನ್ ಹೊನ್ನಳ್ಳಿ ಅಗಲಿಕೆಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.