ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಕೊರೊನಾ ಪಾಸಿಟಿವ್…

146
firstsuddi

ಬೆಂಗಳೂರು : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಹೆಚ್. ಡಿ. ರೇವಣ್ಣ ಅವರಿಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದ ಹಿನ್ನೆಲೆ, ಇಂದು ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.