ಮಾಜಿ ಸಿಎಂ ಯಡಿಯೂರಪ್ಪನವರ ಅತ್ತಿಗೆ ವಿಧಿವಶ…

77
firstsuddi

ಮಂಡ್ಯ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅತ್ತಿಗೆ ಶಾರದಮ್ಮ (90) ಅನಾರೋಗ್ಯದಿಂದ ಇಂದು ಮುಂಜಾನೆ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆಯಲ್ಲಿ ನಿಧನ ಹೊಂದಿದ್ದಾರೆ.

ಇಂದು ವೀರಶೈವ ಸಮುದಾಯದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅತ್ತಿಗೆಯ ಅಂತ್ಯಕ್ರಿಯೆಲ್ಲಿ ಯಡಿಯೂರಪ್ಪ ಅವರು ಭಾಗಿಯಾಗಲಿದ್ದಾರೆ.