ಮಾನಸಿಕ ಖಿನ್ನತೆ – ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ…

65
firstsuddi

ಉಡುಪಿ : ಮಾನಸಿಕ ಖಿನ್ನತೆಗೊಳಗಾಗಿದ್ದ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ನಿನ್ನೆ ನಡೆದಿದೆ.

ಮೃತ ಬಾಲಕಿಯನ್ನು ದೀಪಾ(15) ಎಂದು ಗುರುತಿಸಲಾಗಿದೆ. ಬಾಗಲಕೋಟೆ ಮೂಲದ ನಿವಾಸಿಯಾಗಿರುವ ದೀಪ ಕುಟುಂಬ ಕಳೆದ ಕೆಲ ವರ್ಷಗಳಿಂದ ಬನ್ನಂಜೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಫಿಡ್ಸ್ ಹಾಗೂ ಇನ್ನಿತರ ಕಾಯಿಲೆಗಳಿಂದ ಬಳಲುತ್ತಿದ್ದ ದೀಪಾಗೆ ಓದಿಗೆ ತೊಡಗಕಾಗುತ್ತಿದ್ದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಇದರಿಂದ ಮನನೊಂದ ಬಾಲಕಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.