ಬಳ್ಳಾರಿ: ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ರೇಡಿಯೋ ಪಾರ್ಕ್ ಬಳಿ ನಡೆದಿದೆ.
ಅಕ್ಕಿ ಮಂಜು ಕೊಲೆಯಾದ ವ್ಯಕ್ತಿ. ಮಂಜು ಅಕ್ಕಿ ವ್ಯಾಪಾರ ಮತ್ತು ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಭೀಕರ ಹತ್ಯೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ.
ಈ ಭೀಕರ ಕೊಲೆಯನ್ನು ನೋಡ್ತಿದ್ದಂತೆ ಅಕ್ಕಪಕ್ಕದಲ್ಲಿ ನಿಂತಿದ್ದವರು ಓಡಿ ಹೋಗಿದ್ದಾರೆ. ಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಕೌಲಬಜಾರ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










