ನವದೆಹಲಿ : ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾದ ಪರಿಣಾಮ ವಿಧಿಸಲಾಗಿದ್ದ ಎಲ್ಲಾ ಕೊರೊನಾ ನಿರ್ಬಂಧಗಳನ್ನು ಮಾರ್ಚ್ 31 ರಿಂದ ತೆರವು ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.
ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಾರಿಗೊಳಿಸಿದ್ದ ಕೋವಿಡ್ ಸುರಕ್ಷತಾ ಕ್ರಮಗಳನ್ನು ಮಾರ್ಚ್ 31ರಿಂದ ಅನುಸರಿಸುವ ಅಗತ್ಯವಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಮಾತ್ರ ಕಡ್ಡಾಯವಾಗಿರುತ್ತದೆ ಸ್ಪಷ್ಟಪಡಿಸಿದೆ.
ದೇಶದಲ್ಲಿ ಕೊರೊನಾ ತೀವ್ರತೆ ಕಡಿಮೆಯಾಗಿದೆ. ಹೀಗಾಗಿ ಎಲ್ಲ ಕೊರೊನಾ ನಿಯಮಗಳನ್ನು ಮಾರ್ಚ್ 31 ರಿಂದ ತೆರವು ಮಾಡಲು ಸರ್ಕಾರ ಮುಂದಾಗಿದೆ. ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಳ್ಳಲಾಗಿದ್ದ ವಿಪತ್ತು ನಿರ್ವಹಣಾ ಕಾಯ್ದೆಯನ್ನು ಅನ್ವಯಿಸುವ ಅಗತ್ಯವಿಲ್ಲ. ಆದರೆ ಸಾವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಮುಂದುವರಿಸಬೇಕು ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.










