ಮಾಸ್ಕ್ ಧರಿಸುವುದು ಕಡ್ಡಾಯ, ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಬೇಕು : ಮೋದಿ ಸೂಚನೆ…

179
Firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆ ಇಂದು ವಿಡಿಯೋ ಕಾನ್ಫೆರನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ ಅವರು, ಮಾಸ್ಕ್ ಕಡ್ಡಾಯ ಮಾಡಬೇಕು. ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಬೇಕು. ಅಲ್ಲದೇ ಕ್ಲಿನಿಕಲ್ ಸೌಲಭ್ಯ ಹೆಚ್ಚು ಮಾಡುವಂತೆ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.

ಮಾಸ್ಕ್ ಧರಿಸುವುದನ್ನ ಜನರು ಗಂಭೀರವಾಗಿ ಪರಿಗಣಿಸಿಲ್ಲ. ಕೆಲವೆಡೆ ಕೊರೊನಾ 2ನೇ ಅಲೆ ಕಂಡು ಬರುತ್ತಿದೆ. ಭಾರತದಲ್ಲಿ ಶೇ.96 ಹೆಚ್ಚು ಪ್ರಕರಣಗಳು ಚೇತರಿಸಿಕೊಂಡಿವೆ. ಸಾವಿನ ಪ್ರಮಾಣ ಅತ್ಯಂತ ಕಡಿಮೆ ಇರುವ ದೇಶಗಳಲ್ಲಿ ಭಾರತವೂ ಒಂದಾಗಿದೆ. ಮೈಕ್ರೋ ಕಂಟೈನ್ಮೆಂಟ್ ಆಗತ್ಯವಾಗಿದ್ದು, ಹಳ್ಳಿಗಳಿಗೆ ಸೋಂಕು ವ್ಯಾಪಿಸಿದ್ರೆ ಕಷ್ಟ. ಹೀಗಾಗಿ ಚಿಕ್ಕ ಚಿಕ್ಕ ಪಟ್ಟಣಗಳಲ್ಲೂ ಟೆಸ್ಟಿಂಗ್ ಹೆಚ್ಚಿಸಿ ಇಲ್ಲದಿದ್ದರೆ, ದೇಶಾದ್ಯಂತ ಮಹಾಮಾರಿ ಮಹಾ ಸ್ಫೋಟವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ಚಿಕಿತ್ಸೆ ಬಳಿಕವೂ ನಾವು ಕೊರೊನಾ ಬಗ್ಗೆ ಜಾಗೃತರಾಗಿರಬೇಕು. ಜಿನೊಮ್ ಟೆಸ್ಟಿಂಗ್ ಗಳನ್ನು ನಡೆಸಬೇಕು. ಇದರಿಂದ ವೈರಸ್ ರೂಪಾಂತರಿವಾಗಿರುವ ಬಗ್ಗೆ ಮಾಹಿತಿ ಸಿಗಲಿದೆ. ದೇಶದಲ್ಲಿ ಲಸಿಕೆಗಳು ಪೂರ್ಣ ಪ್ರಮಾಣದಲ್ಲಿ ಬಳಕೆಯಾಗುತ್ತಿಲ್ಲ. ಲಸಿಕೆ ವೇಸ್ಟ್ ಆಗದಂತೆ ಟಾರ್ಗೆಟ್ ಹಾಕಿಕೊಳ್ಳಬೇಕು. ತೆಲಂಗಾಣ, ಆಂಧ್ರಪ್ರದೇಶ ಮತ್ತು ಉತ್ತರಪ್ರದೇಶಗಳಲ್ಲಿ ವ್ಯಾಕ್ಸಿನ್ ವ್ಯರ್ಥವಾಗುತ್ತಿದೆ
ವ್ಯಾಕ್ಸಿನ್ ವ್ಯರ್ಥ ವಾಗಲು ಬಿಡಬಾರದು. ರಾಜ್ಯ ಸರ್ಕಾರ ಇದನ್ನು ಟ್ರ್ಯಾಕ್ ಮಾಡಬೇಕು ಎಂದು ಮೋದಿ ಕರೆ ನೀಡಿದರು.