ಮಾ.7ರಂದು ರಾಜ್ಯ ಬಜೆಟ್ ಮಂಡನೆ: ಮುಖ್ಯಮಂತ್ರಿ ಸಿದ್ದರಾಮಯ್ಯ.

34

ಬೆಂಗಳೂರು: ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದರು. ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ ಎಂದು ಭರವಸೆ ನೀಡಿದರು. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇವತ್ತು ಕೂಡ ಸಭೆ ಮಾಡಿದ್ದೀನಿ. ಕರ್ನಾಟಕ ಸರ್ಕಾರ ಯಾವಾಗಲೂ ರೈತರ ಹಿತ ಕಾಪಾಡಲು ಹಿಂದೆ ಬಿದ್ದಿಲ್ಲ. ಯಾವತ್ತೂ ಕೂಡ ರೈತರ ಜೊತೆ ಇರುತ್ತೇವೆ. ಕೃಷಿಕರ ಜೊತೆ ಇರುತ್ತೇವೆ ಎಂಬ ಮಾತು ಕೊಡುತ್ತೇನೆ. ಬೆಲೆ ಏರಿಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಧಾರ. ರಾಜ್ಯ ಸರ್ಕಾರದಿಂದ ಬೆಲೆ ಏರಿಕೆಗೆ ಏನೆಲ್ಲಾ ಮಾಡಬೇಕು ಅದನ್ನ ಮಾಡುತ್ತೇವೆ ಎಂದು ಹೇಳಿದರು.