ಮಿಥುನ್ ರೈ ಒಬ್ಬ ಚಿಲ್ಲರೆ ಮನುಷ್ಯ, ಅವನಿಗೆಲ್ಲಾ ನಾನು ಉತ್ತರ ಕೊಡಲ್ಲ : ಶೋಭಾ ಕರಂದ್ಲಾಜೆ.

66
firstsuddi

ಉಡುಪಿ : ಮಿಥುನ್ ರೈ ಒಬ್ಬ ಚಿಲ್ಲರೆ ಮನುಷ್ಯ ಅವನಿಗೆಲ್ಲಾ ನಾನು ಉತ್ತರ ಕೊಡುವುದಿಲ್ಲ ಎಂದು ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿದರು.

ಉಡುಪಿಯ ಮಲ್ಪೆ ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಾಡುವಂತೆ ಕಾಂಗ್ರೆಸ್ ಪ್ರತಿಭಟನೆ ಮಾಡಿತ್ತು. ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ನಾಪತ್ತೆಯಾಗಿದ್ದಾರೆ. ಅವರ ಜೊತೆ ಸೆಲ್ಫಿ ತೆಗೆದವರಿಗೆ ಐದು ಸಾವಿರ ರೂಪಾಯಿ ಬಹುಮಾನ ಎಂದು ಕಾಂಗ್ರೆಸ್ ಮುಖಂಡ ಮಿಥುನ್ ರೈ ಘೋಷಿಸಿದ್ದರು.

ಈ ಕುರಿತು ಇಂದು ಜಿಲ್ಲೆಯಲ್ಲಿ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ ನಾನು ಉಡುಪಿಗೆ ಬಂದಿದ್ದೇನೆ ಬನ್ನಿ ಎಲ್ಲರೂ ಸೆಲ್ಫಿ ತೆಗೆಯಿರಿ. ಅವ ಎಲ್ಲಿ ಮಿಥುನ್ ರೈ ಅವನು ಫಸ್ಟ್ ಬರಲಿ. ಈ ವಿಷಯಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ. ಅವನನ್ನು ಯಾಕೆ ದೊಡ್ಡ ಮನುಷ್ಯ ಮಾಡಬೇಕು. ಅವನು ಚಿಲ್ಲರೆ ಮನುಷ್ಯ ಎಂದು ವಾಗ್ದಾಳಿ ನಡೆಸಿದರು.