ಮಿನಿಬಸ್ ಕಂದಕಕ್ಕೆ ಉರುಳಿ 33 ಪ್ರಯಾಣಿಕರ ಸಾವು…

325
firstsuddi

ಜಮ್ಮು ಕಾಶ್ಮೀರ : ಮಿನಿಬಸ್ ಕಂದಕಕ್ಕೆ ಉರುಳಿ 33ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಕಾಶ್ಮೀರದ ಕಿಶ್ತ್ವಾರ ಜಿಲ್ಲೆಯಲ್ಲಿ ನಡೆದಿದೆ. ಕೇಶ್ವನ್‍ನಿಂದ ಕಿಶ್ತ್ವಾರಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, 33 ಪ್ರಯಾಣಿಕರು ಮೃತಪಟ್ಟಿದ್ದು, 22 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.