ಮೀಸಲಾತಿ ವಿಚಾರ.. ಸರ್ಕಾರ ಲಿಂಗಾಯತ, ಒಕ್ಕಲಿಗರನ್ನ ಮಂಗ ಮಾಡಿದೆ : ಹೆಚ್​ಡಿಕೆ ಕಿಡಿ…

70
firstsuddi

ತುಮಕೂರು : ಪಂಚಮಸಾಲಿ ಸಮುದಾಯದ ಮೀಸಲಾತಿ ಘೋಷಣೆ ವಿಚಾರದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಮೀಸಲಾತಿ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡ ಇದೆ. ಕೆಲವು ಮಾರ್ಪಾಡು ಮಾಡಿಕೊಂಡಿದ್ದಾರೆ. ವೀರೇಶ್ವರ ಲಿಂಗಾಯತ ಹಾಗೂ ಒಕ್ಕಲಿಗರನ್ನು ಮಂಗ ಮಾಡಿದ್ದಾರೆ. 3ಎ ಹಾಗೂ 3ಬಿ ಪ್ರವರ್ಗವನ್ನ ಸೈಲೆಂಟ್ ಮಾಡಿದ್ದಾರೆ. ಇವರು ಮೀಸಲಾತಿ ಕೊಡುವಷ್ಟರಲ್ಲಿ ಸರ್ಕಾರವೇ ಇರಲ್ಲ ಎಂದು ಟೀಕಿಸಿದರು.

ತಾಲೂಕಿನ ಉರ್ಡಿಗೆರೆ ಗ್ರಾಮದಲ್ಲಿ ಮಾತನಾಡಿದ ಅವರು, ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಜನಾಂಗಕ್ಕೆ ಒಂದು ರೀತಿ ಮೂಗಿಗೆ ತುಪ್ಪ ಸವರುವ ಬದಲು ಹಣೆಗೆ ಸವರಿ ಅದರ ವಾಸನೆಯನ್ನು ಪಡೆದುಕೊಳ್ಳುವಂತೆ ಸರ್ಕಾರ ಮಾಡಿದೆ ಎಂದು ಕುಟುಕಿದ್ದಾರೆ.

ಬಿಜೆಪಿಯವರು ಚುನಾವಣೆಗಾಗಿ ಈ ರೀತಿ ಮಾಡುತಿದ್ದಾರೆ. ಪಂಚಮ ಸಾಲಿಗರು 2ಎ ಸೇರಿಸಿ ಎಂದು ಬೇಡಿಕೆಯಿಟ್ಟರೆ, 2ಡಿ ಮಾಡಿದ್ದಾರೆ. ಬಿಜೆಪಿ ಸರ್ಕಾರ ತೆಗೆದುಕೊಂಡ ಈ ತೀರ್ಮಾನ ಹಲವು ಜನಾಂಗವನ್ನು ಎತ್ತಿಕಟ್ಟುವಂತಾಗಿದೆ. ಮೀಸಲಾತಿ ಅನ್ನೋದು ಧ್ವನಿ ಇಲ್ಲದ ವರ್ಗಕ್ಕೆ ಅನುಕೂಲ ಆಗಬೇಕು, ಆದ್ರೆ ಸರ್ಕಾರ ತೆಗೆದುಕೊಂಡ ತೀರ್ಮಾನದಿಂದ ಜನತೆಗೆ ದ್ರೋಹ ಬಗೆದಂತಾಗಿದೆ ಎಂದು ಕಿಡಿಕಾರಿದ್ದಾರೆ.

ಲಿಂಗಾಯತ ಹಾಗೂ ಒಕ್ಕಲಿಗರ ಪ್ರತ್ಯೇಕ ಪ್ರವರ್ಗ ರಚಿಸಿ ಮೀಸಲಾತಿ ನೀಡುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. 3ಬಿ ಪ್ರವರ್ಗದಲ್ಲಿದ್ದ ಲಿಂಗಾಯತರಿಗೆ 2ಡಿ ಪ್ರವರ್ಗ ಹಾಗೂ 3ಎ ಪ್ರವರ್ಗದಲ್ಲಿದ್ದ ಒಕ್ಕಲಿಗರಿಗಾಗಿ 2ಸಿ ಪ್ರತ್ಯೇಕ ಪ್ರವರ್ಗ ರಚಿಸಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಮೀಸಲಾತಿ ಪ್ರಮಾಣ ಇನ್ನೂ ನಿಗದಿ ಮಾಡಿಲ್ಲ.