ಮುಂದಿನ ಸಿಜೆಐ ಹೆಸರಿಸುವಂತೆ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್​ಗೆ ಕೆಂದ್ರದಿಂದ ಪತ್ರ.

60
firstsuddi

ನವದೆಹಲಿ : ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ನವೆಂಬರ್ 8 ರಂದು ನಿವೃತ್ತರಾಗುತ್ತಾರೆ. ಈ ಹಿನ್ನೆಲೆಯಲ್ಲಿ ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ ಎಂದು ಮೂಲಗಳು ತಿಳಿಸಿವೆ.

ನಿಯಮದ ಪ್ರಕಾರ ಸರ್ಕಾರ, ನಿರ್ಗಮಿತವಾಗಲಿರುವ ಮುಖ್ಯ ನ್ಯಾಯಮೂರ್ತಿಗಳಿಗೆ ಮುಂದಿನ ಸಿಜೆಐ ಹೆಸರು ಸೂಚಿಸುವಂತೆ ಪತ್ರ ಬರೆಯುತ್ತದೆ. ಇದಕ್ಕೆ ಪ್ರತಿಯಾಗಿ ನಿವೃತ್ತಿಯ ಒಂದು ತಿಂಗಳ ಮೊದಲು ಉತ್ತರಾಧಿಕಾರಿಯಾಗಿ ಅತ್ಯಂತ ಹಿರಿಯ ನ್ಯಾಯಾಧೀಶರ ಹೆಸರನ್ನು ಶಿಫಾರಸು ಮಾಡಲಾಗುತ್ತದೆ.

ನ್ಯಾಯಮೂರ್ತಿ ಲಲಿತ್ ಅವರು ನವೆಂಬರ್ 8 ರಂದು ನಿವೃತ್ತರಾಗಲಿದ್ದು, ಸಂಪ್ರದಾಯದಂತೆ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರನ್ನು ಹಿರಿತನದ ಪ್ರಕಾರ ಹುದ್ದೆಗೆ ಶಿಫಾರಸು ಮಾಡಬೇಕಿದೆ. ನ್ಯಾಯಮೂರ್ತಿ ಲಲಿತ್, ನ್ಯಾ ಡಿ.ವೈ. ಚಂದ್ರಚೂಡ್ ಅವರನ್ನು ಮುಂದಿನ ಸಿಜೆಐ ಎಂದು ಹೆಸರಿಸುವ ಸಾಧ್ಯತೆಯಿದೆ.