ಮುಂಬೈ : ಟೆಂಪೋದಲ್ಲಿ ಮಹಿಳೆ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿದ್ದಾನೆ.
ಮುಂಬಯಿನ ಸಾಕಿ ನಾಕಾ ಪ್ರದೇಶದ ಕೈರಾನಿ ರಸ್ತೆಯಲ್ಲಿ ಕಾಮುಕನೊಬ್ಬ 34 ವರ್ಷದ ಮಹಿಳೆಯನ್ನ ಟೆಂಪೋದಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿರುವುದಲ್ಲದೇ ಸಂತ್ರಸ್ತೆಯ ಖಾಸಗಿ ಭಾಗಕ್ಕೆ ರಾಡ್ ಹಾಕಿ ಅಮಾನವೀಯವಾಗಿ ವರ್ತಿಸಿದ್ದಾನೆ.
ಇನ್ನು ಕೈರಾನಿ ರಸ್ತೆಯಲ್ಲಿ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಹಲ್ಲೆ ನಡೆಸುತ್ತಿರುವ ಬಗ್ಗೆ ಕಂಟ್ರೋಲ್ ರೂಂಗೆ ದೂರು ಬಂದಿದೆ. ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸುವಷ್ಟರಲ್ಲಿ ಕೃತ್ಯ ನಡೆದಿದೆ. ಟೆಂಪೋ ಒಳಗಡೆ ಮಹಿಳೆಯ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಗಮನಿಸಿದ ಪೊಲೀಸರು ಕೂಡಲೇ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಸಂತ್ರಸ್ತೆಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಮೋಹನ್ ಚೌಹಾಟ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.










