ಬೆಂಗಳೂರು : ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ.ಜಗದೀಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಈ ಸಂಬಂಧ ನಿನ್ನೆ ರಾಜ್ಯ ಸರ್ಕಾರದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಎರಡು ವರ್ಷಗಳ ಕಾಲ ಉಡುಪಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ ಜಗದೀಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ಬೆಂಗಳೂರಿಗೆ ವರ್ಗಾಯಿಸಲಾಗಿದೆ.
ಈಶಾನ್ಯ ಸಾರಿಗೆಯ ಎಂಡಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೂರ್ಮ ರಾವ್.ಎಂ ಅವರನ್ನು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗ ಮಾಡಲಾಗಿದೆ.










