ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಯಡಿಯೂರಪ್ಪ ಅವರ ಸಂಪರ್ಕದಲ್ಲಿದ್ದ ಸಚಿವರು ಹಾಗೂ ಅಧಿಕಾರಿಗಳಿಗೆ ಆತಂಕ ಶುರುವಾಗಿದೆ. ಯಡಿಯೂರಪ್ಪ ಅವರಿಗೆ ಸೋಂಕು ತಗುಲಿರುವ ಬಗ್ಗೆ ಸ್ವತಃ ತಾವೇ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ಖಚಿತಪಡಿಸಿದ್ದಾರೆ. ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಮನವಿ ಮಾಡಿಕೊಂಡಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) August 2, 2020










