ಮುಡಾ ಕೇಸ್ ವಿಚಾರಣೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್ ಡೇ.

14

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್ ಡೇ ಆಗಿದೆ. ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ಇಂದು ಮಹತ್ತರವಾದ ಆದೇಶ ಹೊರ ಬೀಳುವ ಸಾಧ್ಯತೆ ಇದೆ. ಧಾರವಾಡ ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಇಂದು ಬಹುತೇಕ ಈ ಪ್ರಕರಣದ ಆದೇಶ ನೀಡುವ ಸಾಧ್ಯತೆ ಹೆಚ್ಚಾಗಿದೆ. ಈ ಕುರಿತು ಮಾಧ್ಯಮಗಾರರ ಜೊತೆ ಮಾತನಾಡಿದ ದೂರುದಾರ ಸ್ನೇಹಮಹಿ ಕೃಷ್ಣ, ಇವತ್ತು ನಿಶ್ಚಿತವಾಗಿಯೂ ಪ್ರಕರಣದ ತನಿಖೆ ಸಿಬಿಐಗೆ ಹೋಗುತ್ತದೆ. ಆದೇಶದ ಬಳಿಕ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ನೀಡುವ ಬೆಳವಣಿಗೆಯೂ ನಡೆಯುತ್ತದೆ ಎಂದು ಹೇಳಿದ್ದಾರೆ. ಮುಡಾದಿಂದ 14 ಸೈಟ್‍ಗಳನ್ನು ಅಕ್ರಮವಾಗಿ ಪಡೆದ ಆರೋಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಯ ಮೇಲಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಮತ್ತು ಇ.ಡಿ ಅಧಿಕಾರಿಗಳು ಮುಖ್ಯಮಂತ್ರಿ ಕುಟುಂಬಸ್ಥರ ವಿಚಾರಣೆ ನಡೆಸಿದ್ದಾರೆ. ಕೇಸನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಇಂದು ನಡೆಯಲಿದೆ.