ಮುರುಘಾ ಮಠದ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ದಂಪತಿಗೆ ಜಾಮೀನು…

52
firstsuddi

ಚಿತ್ರದುರ್ಗ: ಮುರುಘಾ ಮಠದ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ಅವರಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ.

ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿಯಲ್ಲಿ ಎಸ್.ಕೆ.ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮುರುಘಾ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿ ಅವರು ನೀಡಿದ ದೂರನ್ನು ಆಧರಿಸಿ ಎಸ್.ಕೆ.ಬಸವರಾಜನ್ ವಿರುದ್ಧ ಸೆಕ್ಷನ್ 354 (ಅತ್ಯಾಚಾರಕ್ಕೆ ಯತ್ನ) ಹಾಗೂ ಬಸವರಾಜನ್ ಮತ್ತು ಸೌಭಾಗ್ಯ ವಿರುದ್ಧ ಸೆಕ್ಷನ್ 341, 342, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಜಾಮೀನು ಕೋರಿ ಬಸವರಾಜನ್‌ ದಂಪತಿ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿದೆ.