ಮುರುಳೀಧರನ್ ಜೀವನಾಧಾರಿತ ಚಿತ್ರದಿಂದ ಹೊರಬಂದ ನಟ ವಿಜಯ್ ಸೇತುಪತಿ-ಮಗಳಿಗೆ ಅತ್ಯಾಚಾರ ಬೆದರಿಕೆ…

116
firstsuddi

ಚೆನ್ನೈ : ಶ್ರೀಲಂಕಾ ಕ್ರಿಕೆಟ್ ತಂಡದ ಆಟಗಾರ ಮುತ್ತಯ್ಯ ಮುರುಳೀಧರನ್ ಅವರ ಜೀವನಾಧಾರಿತ ಚಿತ್ರದಿಂದ ಹೊರಬಂದ ತಮಿಳು ನಟ ವಿಜಯ್ ಸೇತುಪತಿ ಮಗಳಿಗೆ ದುಷ್ಕರ್ಮಿಗಳು ಅತ್ಯಾಚಾರ ಬೆದರಿಕೆ ಹಾಕಿದ್ದಾರೆ.

ವಿಜಯ್ ಸೇತುಪತಿ ಅವರು ಈ ಹಿಂದೆ ಕ್ರಿಕೆಟಿಗ ಮುತ್ತಯ್ಯ ಮುರುಳೀಧರನ್ ಅವರ ಜೀವನಾಧಾರಿತ ಚಿತ್ರದಲ್ಲಿ ನಟಿಸಲು ಸಿದ್ಧರಾಗಿದ್ದರು. ಬಳಿಕ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಆದರೆ ತಮಿಳುನಾಡಿನಲ್ಲಿ ಈ ಸಿನಿಮಾಗ ಸಾರ್ವಜನಿಕರು ಭಾರಿ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ, ವಿಜಯ್ ಸೇತುಪತಿ ಅವರು ಚಿತ್ರದಿಂದ ಹೊರಬಂದಿದ್ದರು. ಚಿತ್ರದಿಂದ ಹೊರಬಂದ ಬೆನ್ನಲ್ಲೇ ವಿಜಯ್ ಸೇತುಪತಿ ಅವರ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಮಾಡಬೇಕು ಎಂದು ಟಿಟರ್‍ನಲ್ಲಿ ವ್ಯಕ್ತಿಯೋರ್ವ ಬೆದರಿಕೆ ಹಾಕಿದ್ದಾರೆ. ಇದರಿಂದ ಆಕ್ರೋಶಗೊಂಡ ಅಭಿಮಾನಿಗಳು ಕೂಡಲೇ ಆತನನ್ನು ಪತ್ತೆಹಚ್ಚಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ..