ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಸುಮಾರು 250 ಅಡಿ ಎತ್ತರದಿಂದ ಕೆಳಗೆ ಬಿದ್ದ ಘಟನೆ ತಾಲೂಕಿನ ಮುಳ್ಳಯ್ಯನಗಿರಿ ಸಮೀಪದ ಕವಿಕಲ್ ಗಂಡಿ ಬಳಿ ನಡೆದಿದೆ. ತೆಲಂಗಾಣದಿಂದ ಪ್ರವಾಸಕ್ಕೆ ಬಂದಿದ್ದ ಐದು ಜನರಿದ್ದ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು 250 ಅಡಿ ಎತ್ತರದಿಂದ ಪ್ರಪಾತಕ್ಕೆ ಬಿದ್ದಿದೆ. ಕಾರು ಬೀಳುವಾಗ ಮರ, ರಂಬೆ ಕೊಂಬೆಗಳು ಸಿಲುಕಿದ ಹಿನ್ನಲೆ ಕಾರು ಬೀಳುವ ವೇಗ ಕಡಿಮೆಯಾಗಿದ್ದು. ಐವರಿಗೆ ಗಂಭೀರ ಗಾಯವಾಗಿದ್ದು ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಪೋಲೀಸ್ ಠಾಣೆ ಇನ್ಸ್ಪೆಕ್ಟರ್ ಸಚಿನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










