ಮುಸಲ್ಮಾನ ಗೂಂಡಾಗಳು ಹಿಂದೂ ಕಾರ್ಯಕರ್ತನನ್ನು ಕೊಲೆ ಮಾಡಿದ್ದಾರೆ – ಸಚಿವ ಈಶ್ವರಪ್ಪ.

92
firstsuddi

ಬೆಂಗಳೂರು : ಮುಸಲ್ಮಾನ ಗೂಂಡಾಗಳಿಂದ ಹಿಂದೂ ಕಾರ್ಯಕರ್ತನ ಕೊಲೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡುತ್ತದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ ಎಂದಿದ್ದಾರೆ.

ಘಟನೆ ಬಗ್ಗೆ ಸಿಎಂ ಮತ್ತು ಗೃಹ ಸಚಿವರ ಜೊತೆ ಮಾತನಾಡುತ್ತೇನೆ. ಡಿ ಕೆ ಶಿವಕುಮಾರ್ ಅವರು, ಸೂರತ್ ನಿಂದ ಕೇಸರಿ ಶಾಲು ತರಿಸಿದ್ದಾಗಿ ಹೇಳಿಕೆ ನೀಡಿದ್ದರು. ಡಿಕೆ ಶಿವಕುಮಾರ್ ಆ ಹೇಳಿಕೆಯಿಂದ ಪ್ರೇರಣೆ ಪಡೆದು ಮುಸ್ಲಿಂ ಗೂಂಡಾಗಳು ನಿನ್ನೆ ರಾತ್ರಿ ನಮ್ಮ ಪ್ರಾಮಾಣಿಕ ಕಾರ್ಯಕರ್ತ ಹರ್ಷನ ಕೊಲೆ ಮಾಡಿದ್ದಾರೆ ಎಂದರು.